ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ – ಶಿವಪಂಚಾಕ್ಷರಿ ಮಹಿಮೆ ಯಕ್ಷಗಾನ ಪ್ರದರ್ಶನ
ಕಾರ್ಕಳ : ಗಣಿತನಗರ ಶ್ರೀ ಮಹಾಗಣಪತಿ ದೇವಸ್ಥಾನದ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮತ್ತು ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮೇ 28 ರಂದು ಬೆಳಿಗ್ಗೆ 10:30 ಗಂಟೆಗೆ ಗಣಿತ ನಗರ ಕ್ಯಾಂಪಸ್‌ನಲ್ಲಿ ಜರುಗಲಿದೆ.
ಸಂಪುಟ ನರಸಿಂಹ ಮಠ ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಟ್ರಸ್ಟಿ ಯೋಗೀಶ್ ಮಲ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದಲ್ಲಿ ಮಹಾಪೂಜೆ ನೆರವೇರಲಿದೆ.
ಶಿವ ಪಂಚಾಕ್ಷರಿ ಮಹಿಮೆ
ರಾತ್ರಿ 8 ಗಂಟೆಗೆ ಸಾಲಿಗ್ರಾಮ ಶ್ರೀ ಗುರು ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ಶಿವ ಪಂಚಾಕ್ಷರಿ ಮಹಿಮೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.