ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ : ಎಂ. ಬಿ. ಪಾಟೀಲ್‌ ಸ್ಪಷ್ಟನೆ

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದ ಸಚಿವ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ, ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ ಎಂದು ಸಚಿವ ಎಂ. ಬಿ. ಪಾಟೀಲ್‌ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದರು.
ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್‌ಐ ನೇಮಕಾತಿ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತೇವೆ.ಎಲ್ಲ ಹಗರಣಗಳನ್ನು ಲಾಜಿಕ್ ಎಂಡ್‌ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದರು.









































error: Content is protected !!
Scroll to Top