ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ ರದ್ದು

ಹತ್ತು ತಿಂಗಳಿಗೆ ಕೊನೆಗೊಂಡ 22 ನಿಗಮಗಳ ಅಧ್ಯಕ್ಷರ ಅಧಿಕಾರ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ಅಧಿವೇಶನದ ದಿನವೇ ಹಿಂದಿನ ಸರ್ಕಾರ ಮಾಡಿದ್ದ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳ ನೇಮಕಾತಿಗಳನ್ನು ರದ್ದುಗೊಳಿಸಿದೆ. ನಿಗಮ ಮಂಡಳಿಗಳಿಗೆ ನೀಡಲಾದ ಅನುದಾನ ಹಾಗೂ ಹಣ ಹಂಚಿಕೆಯನ್ನು ತತಕ್ಷಣದಿಂದಲೇ ತಡೆ ಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಹಿಂದಿನ ಸರ್ಕಾರದ‌ ಅಕಾಡೆಮಿಗಳು, ನಿಗಮ-ಮಂಡಳಿಗಳ ಅಧ್ಯಕ್ಷ, ಸದಸ್ಯರ, ನಿರ್ದೇಶಕರ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ರದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಅವಧಿಯಲ್ಲಿ ನೇಮಕವಾಗಿದ್ದ ನಿಗಮ-ಮಂಡಳಿ ಅಧ್ಯಕ್ಷರು, ಸದಸ್ಯರು,‌ನಿರ್ದೇಶಕರನ್ನು ವಜಾಗೊಳಿಸಿದೆ. ತತಕ್ಷಣದಿಂದಲೇ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಉಪಯೋಗಿಸುತ್ತಿದ್ದ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ವಾಪಸ್‌ ಪಡೆಯಲಾಗುತ್ತಿದೆ.
ಎಲ್ಲ ಇಲಾಖೆ, ಅಕಾಡೆಮಿಗಳು, ನಿಗಮ ಹಾಗೂ ಮಂಡಳಿಗಳು ಚಾಲನೆ ನೀಡಲಾಗಿದ್ದ ಕಾಮಗಾರಿಗಳಿಗೆ ತಡೆ ನೀಡಲಾಗಿದೆ. ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ತಡೆ ನೀಡಿ ಆದೇಶ ಹೊರಡಿಸಲಾಗಿದೆ. ಕಾಮಗಾರಿಗಳಿಗೆ ಸಂಬಂಧಿಸಿದ ಎಲ್ಲ ಮುಂದಿನ ಹಣ ಬಿಡುಗಡೆ, ಹಣ ಪಾವತಿಗಳನ್ನು ತಕ್ಷಣದಿಂದ ತಡೆ ಹಿಡಿಯುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಹಣ ಬಿಡುಗಡೆಯನ್ನು ತಡೆಹಿಡಿಯುವಂತೆ ಆದೇಶಿಸಿದ್ದಾರೆ.
22 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ 2022ರ ಜುಲೈ 25ರಂದು ಸರ್ಕಾರ ಆದೇಶ ಹೊರಡಿಸಿದ್ದು, ಪಕ್ಷ ನಿಷ್ಠ ನಾಯಕರುಗಳಿಗೆ ಮಣೆ ಹಾಕಲಾಗಿತ್ತು. ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವರಿಗೆ ಮುಖಂಡರುಗಳಿಗೆ ನಿಗಮ ಮಂಡಳಿ ನೀಡಲಾಗಿತ್ತು. ಆದರೆ, ಈ ನಾಯಕರಿಗೆ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳ ಆಡಳಿತ 10 ತಿಂಗಳಿಗೇ ಮುಕ್ತಾಯಗೊಂಡಿದೆ. ಗೇರು ಅಭಿವೃದ್ಧಿ ನಿಗಮ ಮಣಿರಾಜ ಶೆಟ್ಟಿ ಸೇರಿ 22 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರ ಹತ್ತು ತಿಂಗಳಿಗೆ ಮುಕ್ತಾಯಗೊಂಡಿದೆ.









































error: Content is protected !!
Scroll to Top