25 ಕೋ. ರೂ. ಮೌಲ್ಯದ ತಿಮಿಂಗಿಲ ವಾಂತಿ ವಶ

ಕೇರಳದ ಮೂವರ ಬಂಧನ

ಮೈಸೂರು: ಜಿಲ್ಲೆಯ ಎಚ್‌.ಡಿ. ಕೋಟೆ ಮತ್ತು ಜಿಲ್ಲಾ ಸೆನ್ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಮೂವರಿಂದ ಸುಮಾರು 25 ಕೋಟಿ ರೂ. ಮೌಲ್ಯದ ಅಪರೂಪದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 9.5 ಕೆಜಿ ತೂಕದ ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸಿದಾಗ ಎಚ್‌.ಡಿ. ಕೋಟೆ ಹ್ಯಾಂಡ್ ಪೋಸ್ಟ್‌ನಲ್ಲಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕೇರಳದ ಕೊಚ್ಚಿ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರು ಎನ್ನಲಾಗಿದೆ.
ಆರೋಪಿಗಳು ಮಾರಲು ಯತ್ನಿಸಿದ್ದು ಅಂಬರ್ ಗ್ರೀಸ್ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಖಚಿತ ಪಡಿಸಿದೆ. ಅಂಬರ್ ಗ್ರೀಸ್‌ಗೆ ವಿದೇಶದಲ್ಲಿ ಅಪಾರ ಬೇಡಿಕೆ ಇದೆ. ಇದನ್ನು ತಿಳಿದ ಆರೋಪಿಗಳು ದುಡ್ಡು ಮಾಡಲು ಈ ಸಾಹಸಕ್ಕೆ ಕೈ ಹಾಕಿದ್ದಾರೆ.



























































































































error: Content is protected !!
Scroll to Top