ಡಿ.ಕೆ.ಶಿವಕುಮಾರ್‌ ಎಂದಿಗೂ ಮುಖ್ಯಮಂತ್ರಿಯಾಗುವುದಿಲ್ಲ : ಬಿಜೆಪಿ ಟಾಂಗ್

ಬೆಂಗಳೂರು: ಐದು ವರ್ಷ ಪೂರ್ಣಾವಧಿಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಿದ್ದರಾಮಯ್ಯ ಬಣದ ಹಿರಿಯ ಸಚಿವ ಎಂ. ಬಿ. ಪಾಟೀಲ್‌ ಹೇಳಿದ ಬಳಿಕ ಬಿಜೆಪಿ ಡಿ. ಕೆ. ಶಿವಕುಮಾರ್‌ ಕಾಲೆಳೆದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಗಳಿಸಿದ್ದರೂ ಮುಖ್ಯಮಂತ್ರಿ ಹುದ್ದೆಗಾಗಿ ಭಾರಿ ಪೈಪೋಟಿ ನಡೆದು ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ನಡುವೆ 30:30 ಸೂತ್ರವನ್ನು ಅನ್ವಯಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್‌ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಬಿಜೆಪಿ ಹೇಳಿದೆ.
ಟ್ವೀಟ್‌ ಮೂಲಕ ಟಾಂಗ್‌ ನೀಡಿರುವ ಬಿಜೆಪಿ, ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವುದೂ ಇಲ್ಲ, ಅವರನ್ನು ಆಗಲು ಸಿದ್ದರಾಮಯ್ಯ ಬಿಡುವುದೂ ಇಲ್ಲ. ಎಂ.ಬಿ. ಪಾಟೀಲ್‌ ಅವರು ಈ ಹೇಳಿಕೆಯ ಮೂಲಕ ಡಿ.ಕೆ. ಶಿವಕುಮಾರ ಅವರಿಗೆ ನೇರವಾದ ಎಚ್ಚರಿಕೆ ರವಾನಿಸಿದ್ದಾರಷ್ಟೆ. ಅದೇನೆ ಇದ್ದರೂ ಬಹುಮತ ದೊರಕಿದ ನಂತರದ ಈವರೆಗಿನ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗ, ಈ ಸರ್ಕಾರ ಸುಸ್ತಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ, ಗ್ಯಾರಂಟಿಯೂ ಇಲ್ಲ ಎಂದು ಹೇಳಿದೆ.
ದಿಲ್ಲಿಯ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ಎಟಿಎಂ ಸರ್ಕಾರ ರಚನೆಯಾಗಿರುವುದು ಮತ್ತು ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ಟ್ವೀಟ್‌ ಮೂಲಕ ಕಾಂಗ್ರೆಸ್‌ ನಾಯಕರಿಗೆ ಟಾಂಗ್ ನೀಡಿದೆ.





























































































































error: Content is protected !!
Scroll to Top