ಏಳು ವಿಪಕ್ಷಗಳು ಸಂಸತ್‌ ಭವನ ಉದ್ಘಾಟನಾ ಸಮಾರಂಭದಲ್ಲಿ ಭಾಗಿ

ಕಾಂಗ್ರೆಸ್‌ ನೇತೃತ್ವದಲ್ಲಿ 19 ವಿಪಕ್ಷಗಳಿಂದ ಬಹಿಷ್ಕಾರ

ಹೊಸದಿಲ್ಲಿ : ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ಸೇರಿ 7 ವಿಪಕ್ಷಗಳು ಹೇಳಿವೆ. 19 ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಉದ್ಘಾಟನಾ ಸಮಾರಂಭದಲ್ಲಿ ಏಳು ಪ್ರತಿಪಕ್ಷಗಳು ಸೇರಿ 25 ರಾಜಕೀಯ ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಭಾನುವಾರ ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್‌ ಭವನವನ್ನು ಉದಘಾಟಿಸಲಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದು ಒಂದು ಸ್ಮರಣೀಯ ಕಾರ್ಯಕ್ರಮವಾಗಲಿದೆ.
ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದ 18 ಮಿತ್ರ ಪಕ್ಷಗಳ ಹೊರತಾಗಿ, ಏಳು ಎನ್‌ಡಿಎಯೇತರ ಪಕ್ಷಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿವೆ. ಬಹುಜನ ಸಮಾಜ ಪಕ್ಷ, ಶಿರೋಮಣಿ ಅಕಾಲಿದಳ, ಜನತಾ ದಳ(ಜಾತ್ಯತೀತ), ಲೋಕ ಜನಶಕ್ತಿ ಪಕ್ಷ- ರಾಮ್ ವಿಲಾಸ್, ಯುವಜನ ಶ್ರಮಿಕ ರೈತ ಕಾಂಗ್ರೆಸ್, ಬಿಜು ಜನತಾ ದಳ ಮತ್ತು ತೆಲುಗು ದೇಶಂ ಪಕ್ಷ ಸೇರಿದಂತೆ ಏಳು ಎನ್‌ಡಿಎಯೇತರ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿವೆ.
ಲೋಕಸಭೆಯಲ್ಲಿ ಒಟ್ಟು 50 ಸಂಸದರನ್ನು ಹೊಂದಿರುವ ಈ ಏಳು ಪಕ್ಷಗಳ ಉಪಸ್ಥಿತಿಯು ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ರಿಲೀಫ್ ನೀಡಿದೆ. ನೂತನ ಸಂಸತ್ ಭವನ ದೇಶದ ಆಸ್ತಿ ಮತ್ತು ತೆರಿಗೆದಾರರ ಹಣದಿಂದ ಅದನ್ನು ನಿರ್ಮಿಸಿದ ಕಾರಣ ತಾವು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್, ಎಡಪಕ್ಷ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಹತ್ತೊಂಬತ್ತು ಪ್ರತಿಪಕ್ಷಗಳು ಒಟ್ಟಾಗಿ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಘೋಷಿಸಿವೆ.





























































































































































































































error: Content is protected !!
Scroll to Top