ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್‌ ಫಲಿತಾಂಶ : ಕ್ರಿಯೇಟಿವ್‌ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರ‍್ಯಾಂಕ್‌‌

ಕಾರ್ಕಳ : ಮೇ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್‌ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ. ನಾಯಕ್‌ ಆಲ್‌ ಇಂಡಿಯಾ ರ‍್ಯಾಂಕಿಂಗ್ ನಲ್ಲಿ 656 ನೇ ಸ್ಥಾನ ಹಾಗೂ ಸುಮುಖ್‌ ಶೆಟ್ಟಿ ಜೆ. ಎಸ್‌., ಬಿ. ಆರ್ಕ್‌ ನಲ್ಲಿ 609 ನೇ ರ‍್ಯಾಂಕ್‌ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಹಾಗೂ ಜೆಇಇ ಆರ್ಕ್‌ ಸಂಯೋಜಕ ಸುಮಂತ್‌ ದಾಮ್ಲೆ ಅಭಿನಂದಿಸಿದ್ದಾರೆ.

error: Content is protected !!
Scroll to Top