ಮೇ 31 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಹೆಬ್ರಿ : 33/11 ಕೆವಿ ಹೆಬ್ರಿ ಉಪವಿದ್ಯುತ್‌ ಸ್ಥಾವರದಿಂದ ಹೊರಡುವ 11ಕೆವಿ ಶಿವಪುರ ಫೀಡರ್‌ನಲ್ಲಿ ಮೇ 31 ರಂದು ವ್ಯವಸ್ಥಾಪನಾ ಕಾಮಗಾರಿ ನಡೆಯಲಿರುವುದರಿಂದ ಅಂದು ಬೆಳಿಗ್ಗೆ 8.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

error: Content is protected !!
Scroll to Top