ಎಂಎಲ್​ಸಿ ಬಿ. ಕೆ. ಹರಿಪ್ರಸಾದ್​​ಗೆ ಹೇಳುವಂಥದ್ದು ಏನೂ ಇಲ್ಲ

ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಎಲ್ಲರೂ ತಲೆ ಬಾಗಲೇಬೇಕು – ವೀರಪ್ಪ ಮೊಯ್ಲಿ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್​ ಬಹುಮತದಿಂದ ಅಧಿಕಾರ ಚುಕ್ಕಾಣಿ ಹಿಡಿದಿದ್ದು, ಮೇ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 24 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಅದರಂತೆ ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಬಿಕೆ ಹರಿಪ್ರಸಾದ್ ರಾಜೀನಾಮೆ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​​ಗೆ ಹೇಳುವಂಥದ್ದು ಏನೂ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ತಲೆ ಬಾಗಲೇಬೇಕು ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಕೊಡುವುದು ಪಕ್ಷ ಅಲ್ಲ, ಸರ್ಕಾರ
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರಿಗೆ ನೀಡಿದ್ದ ಗ್ಯಾರಂಟಿ ಯೋಜನೆ ಖಂಡಿತ ಜಾರಿ ಆಗುತ್ತದೆ. ಈ ವಿಚಾರದಲ್ಲಿ ಯಾಕೆ ಇಷ್ಟು ಆತುರ, ಗ್ಯಾರಂಟಿ ಯೋಜನೆಗಳನ್ನು ಕೊಡುವುದು ಪಕ್ಷ ಅಲ್ಲ, ಸರ್ಕಾರ. ಗ್ಯಾರಂಟಿ ಯೋಜನೆಗಳಿಗೆ ಒಂದಷ್ಟು ಮಾನದಂಡ ಇರುತ್ತವೆ, ಮಾನದಂಡಗಳನ್ನು ನಿಗದಿಪಡಿಸಿ ಗ್ಯಾರಂಟಿ ಜಾರಿ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದಾರೆ. ಅಧಿಕಾರ ಹಂಚಿಕೆ ಕುರಿತು ಈಗ ಚರ್ಚೆ‌ ಬೇಡ. ರಾಜ್ಯದಲ್ಲಿ ಸುಭದ್ರ ಸರ್ಕಾರ ಇದೆ, ಉತ್ತಮ ಆಡಳಿತ ಕೊಡುತ್ತೆವೆ ಎಂದರು.











































































error: Content is protected !!
Scroll to Top