ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆ

ಜೂ. 17ರಂದು ವಾರ್ಷಿಕ ಮಹಾಸಭೆ ಹಾಗೂ ರಾಜ್ಯ ಸರಕಾರಿ ನೌಕರರ ದಿನಾಚರಣೆ

ಹೆಬ್ರಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆಯ ತೃತೀಯ ವರ್ಷದ ವಾರ್ಷಿಕ ಮಹಾಸಭೆ ಹಾಗೂ ದ್ವಿತೀಯ ವರ್ಷದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಜೂ. 17 ರಂದು ಹೆಬ್ರಿ ಗ್ರಾ. ಪಂ. ಸಮಾಜ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.
ಅಂದು 2022 ನೇ ಎಪ್ರಿಲ್‌ ನಿಂದ 2023 ನೇ ಮಾರ್ಚ್‌ ವರೆಗೆ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕರ್ತವ್ಯ ಸಲ್ಲಿಸಿ ಸೇವಾ ನಿವೃತ್ತರಾದ ಸರಕಾರಿ ನೌಕರರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ಪ್ರಶಸ್ತಿ ಪುರಸ್ಕೃತರಾದ ಸರಕಾರಿ ನೌಕರರಿಗೆ ಮತ್ತು ರಾಷ್ಟ್ರ- ರಾಜ್ಯದ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸರಕಾರಿ ನೌಕರರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸರಕಾರಿ ನೌಕರರಿಗೆ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ನೌಕರರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಶಾಖೆಯ ಅಧ್ಯಕ್ಷ ಹರೀಶ್‌ ಪೂಜಾರಿ ಎಸ್.‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



















































































error: Content is protected !!
Scroll to Top