ಕಾರ್ಕಳ : ತಾಲೂಕಿನಲ್ಲಿ ನಡೆದ ಪ್ರತ್ಯೇಕ ಮಟ್ಕಾ ಜುಗಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ 28 ರಂದು ದಾಖಲಾಗಿದೆ.
ಮುಡಾರು ಗ್ರಾಮದ ಮುಡ್ರಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಠಾಣೆ ಪಿಎಸ್ಐ ತೇಜಸ್ವಿ ಸ್ಥಳಕ್ಕೆ ದಾಳಿ ನಡೆಸಿ ಆರೋಪಿ ರಘು ಎನ್. ಎಂಬಾತನ್ನು ಬಂಧಿಸಿ, ಆತನಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ 2260 ರೂ. ಹಣ, ಮಟ್ಕಾ ಬರೆದ ಚೀಟಿ ಮತ್ತು ಬಾಲ್‌ಪೆನ್‌ನನ್ನು ವಶಕ್ಕೆ ಪಡೆಯಲಾಗಿದೆ.
ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ – ಮೂವರ ಬಂಧನ
ಈದು ಗ್ರಾಮದ ಕಂಡಿಗಕಟ್ಟ ಹೊಳೆ ಬದಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟು ಜುಗಾರಿ ಆಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಲ್ಲಿಗೆ ದಾಳಿ ನಡೆಸಿ ಆರೋಪಿಗಳಾದ ನಾಗೇಶ, ಅನಿಲ್, ದಿನೇಶ ಎಂಬುವವರನ್ನು ಬಂಧಿಸಿ, ಅವರಿಂದ ಜುಗಾರಿ ಆಟಕ್ಕೆ ಬಳಸಿದ 4070 ರೂ. ಹಣ, 52 ಇಸ್ಪೀಟ್ ಎಲೆಗಳು, ನೆಲಕ್ಕೆ ಹಾಸಿದ ಪ್ಲಾಸ್ಟಿಕ್ ಚೀಲ ಮತ್ತು ಇಸ್ಪೀಟ್ ಕಾರ್ಡ್ ನ ಪ್ಯಾಕೇಟ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.































































