ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ತಮ್ಮದಾಗಿಸಿಕೊಂಡ ಸಿದ್ದರಾಮಯ್ಯ ರಾಜ್ಯದ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಸದ್ಯ ತಮಗೆ ಈ ಸ್ಥಾನ ಸಿಗುವಂತೆ ಮಾಡಿದ ಮತದಾರ ಪ್ರಭುಗಳಿಗೆ ತಮ್ಮನ್ನು ಭೇಟಿ ಮಾಡಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇನ್ನು ಮುಂದೆ ವರುಣಾ ಕ್ಷೇತ್ರದ ಜನ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡುವುದು ತುಂಬಾ ಸುಲಭ.
ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸುಲಭ ಭೇಟಿಗೆ ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ತಮ್ಮ ಸರಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ವರುಣಾದಿಂದ ಬಂದ ಮತದಾರರು ತಮ್ಮ ಅಡ್ರೆಸ್ ತೋರಿಸಿ ಒಳಗೆ ಹೋಗಲು ಅವಕಾಶ ನೀಡಲಾಗಿದೆ. ಆಧಾರ್, ಐಡಿ ಚೆಕ್ ಮಾಡಿ ವರುಣಾ ಕ್ಷೇತ್ರದ ಮತದಾರರು ಇದ್ರೆ ಅವರನ್ನು ಸಿಎಂ ಭೇಟಿಗೆ ಬಿಡಲು ಪೊಲೀಸರಿಗೆ ಸೂಚಿಸಲಾಗಿದೆ. ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಿಎಂ ಆಗಿದ್ದಾರೆ. ಹೀಗಾಗಿ ಕೊನೆಯ ಅಧಿಕಾರದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಮತದಾರರಿಗೆ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಅಭಿಮಾನಿಗಳು ಮತ್ತಷ್ಟು ಖುಷಿ ಪಟ್ಟಿ ಸಂಭ್ರಮಿಸಿದ್ದಾರೆ.





































