ಜೂ. 2 : 73 ನೇ ವಿಪತ್ತು ನಿರ್ವಹಣಾ ಸಮಿತಿ ಉದ್ಘಾಟನಾ ಕಾರ್ಯಕ್ರಮ

ಕಾರ್ಕಳ : ಶ್ರೀ ಕ್ಷೇ. ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್‌ ಕಾರ್ಕಳ, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ ಹಾಗೂ ಕಾರ್ಕಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಶೌರ್ಯ ಕಾರ್ಯಕ್ರಮದ ಅಂಗವಾಗಿ ಜೂ. 2 ರಂದು ಬೆಳಗ್ಗೆ 10 ಗಂಟೆಗೆ ಕರಿಯಕಲ್ಲು ಶ್ರೀ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ 73 ನೇ ವಿಪತ್ತು ನಿರ್ವಹಣಾ ಸಮಿತಿಯ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ.

ಶಾಸಕ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸಲಿದ್ದು, ಕಾರ್ಕಳ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್‌ ಅನಂತಶಂಕರ್‌ ಬಿ., ಶ್ರೀ ಕ್ಷೇ. ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್‌ ಕರಾವಳಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿನ್ಸಂಟ್‌ ಪಾಯಸ್‌, ಕಾರ್ಕಳ ಸರ್ಕಲ್‌ ಇನ್ಸ್‌ಪೆಕ್ಟರ್‌ ಟಿ. ಡಿ. ನಾಗರಾಜ್‌, ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್‌ ಮೋನಿಸ್‌, ಶ್ರೀ ಕ್ಷೇ. ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್‌ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಹಾಗೂ ಶ್ರೀ ಲಕ್ಷ್ಮೀದೇವಿ ಕಲ್ಯಾಣ ಮಂಟಪದ ಅಧ್ಯಕ್ಷ ಗಣಪತಿ ಹೆಗ್ಡೆ ಭಾಗಿಯಾಗಲಿದ್ದಾರೆ ಎಂದು ಉಡುಪಿ ಪ್ರಾದೇಶಿಕ ವಿಭಾಗ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್‌ ಆಚಾರ್ಯ ಹಾಗೂ ಶ್ರೀ ಕ್ಷೇ. ಧ. ಗ್ರಾ. ಯೋ. ಕಾರ್ಕಳ ತಾಲೂಕು ಯೋಜನಾಧಿಕಾರಿ ಹೇಮಲತಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.













































































error: Content is protected !!
Scroll to Top