ವಿದ್ಯಾರ್ಥಿಗಳ ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.













































































error: Content is protected !!
Scroll to Top