ಯುವಜನತೆಯಲ್ಲಿ ರಕ್ತದಾನ ಮಾಡುವ ಮನೋಭಾವ ಹೆಚ್ಚುತ್ತಿರುವುದು ಉತ್ತಮ ವಿಚಾರ – ಡಾ. ಕೆ.ಆರ್. ಜೋಶಿ

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಂಡಿರುವುದು ಉತ್ತಮ ವಿಚಾರ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ರೀತಿಯಲ್ಲಿ ಕೊಡುಗೆ ಸಲ್ಲಿಸುತ್ತಿದ್ದಾರೆ ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆಯ ಅಧ್ಯಕ್ಷ ಡಾ. ಕೆ.ಆರ್. ಜೋಶಿ ಹೇಳಿದರು.
ಅವರು ಭಾನುವಾರ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಇದರ ನೇತೃತ್ವದಲ್ಲಿ ಸರಕಾರಿ ಹಾಗೂ ಖಾಸಗಿ ಆರೋಗ್ಯ ಇಲಾಖೆ, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಾಗೂ ಜಿಲ್ಲಾ ರಕ್ತ ನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ಎಸ್.ವಿ.ಟಿ. ವಿದ್ಯಾಸಂಸ್ಥೆಯ ಅಂಡಾರು ರುಕ್ಮಿಣಿ ಕಿಣಿ ಸಭಾಭವನದಲ್ಲಿ ನಡೆದ ಬೃಹತ್‌ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಘಟಕದ ಅಧ್ಯಕ್ಷ ಡಾ. ಪ್ರಕಾಶ್ ಕುಮಾರ್, ಜೇಸಿಐ ಕಾರ್ಕಳದ ಅಧ್ಯಕ್ಷ ವಿಘ್ನೇಶ್ ಪ್ರಸಾದ್ ರಾವ್, ರೋಟರಿ ಕ್ಲಬ್ ಕಾರ್ಕಳದ ಪೂರ್ವಾಧ್ಯಕ್ಷ ಶೇಖರ್ ಹೆಚ್., ಜಿಲ್ಲಾ ರಕ್ತ ನಿಧಿ ಕೇಂದ್ರ ಅಜ್ಜರಕಾಡು ಇಲ್ಲಿನ ವೈದ್ಯಾಧಿಕಾರಿ ಡಾ. ವೀಣಾ, ರೆಡ್ ಕ್ರಾಸ್ ಸೊಸೈಟಿ ಕಾರ್ಕಳದ ಕಾರ್ಯದರ್ಶಿ ವೃಷಭರಾಜ್
ಕಡಂಬ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿವಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.error: Content is protected !!
Scroll to Top