ಚಕ್ರವರ್ತಿ ಸೂಲಿಬೆಲೆಗೆ ವಾರ್ನಿಂಗ್ ಕೊಟ್ಟ ಸಚಿವ ಎಂಬಿ ಪಾಟೀಲ್

ವಿಜಯಪುರ : ಹಿಂದಿನಂತೆ ನಾಟಕ, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ಎಂದು ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದು ಹೇಳಿದರು. ಬಿಜೆಪಿ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಆಜಾನ್ ಎಂದೆಲ್ಲಾ ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಬಿಜೆಪಿಯ ಎಲ್ಲ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬಿಜೆಪಿ ಸರಕಾರದಲ್ಲಾದ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಮಾಡಲಾಗುವುದು. ಪಿಎಸ್‌ಐ ಅಕ್ರಮ ನೇಮಕ ಪ್ರಕರಣದ ತನಿಖೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕದ ವಿಚಾರವಾಗಿ ಮಾತನಾಡಿದ ಸಚಿವರು ಬಿಜೆಪಿ, ಆರ್ ಆರ್ ಎಸ್ ಅಜೆಂಡಾ ಇದ್ದ ಪಠ್ಯಗಳನ್ನು ತೆಗೆದುಹಾಕುತ್ತೇವೆ ಎಂದು ಹೇಳಿದ್ದಾರೆ. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುವುದು. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ್ ನಾಯಕರ ಬಗ್ಗೆ ಪಾಠ ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು.error: Content is protected !!
Scroll to Top