ಹಾಡು ಹಾಕುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ
ಚಿಕ್ಕಮಗಳೂರು : ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಶನಿವಾರ ನಡೆದಿದೆ. ವರುಣ್(28) ಎಂಬಾತನೇ ಕೊಲೆಯಾದ ಯುವಕ.
ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿಮಾನಿಗಳು ಶನಿವಾರ ಅಭಿನಂದನಾ ಸಮಾರಂಭ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.
ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಭವಿಸಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಶಿವಮೊಗ್ಗಕ್ಕೆ ಕೊಂಡೊಯ್ದರು ವರುಣ್ ಸಾವನ್ನಪ್ಪಿದ್ದಾನೆ. ಮಂಜು ಹಾಗೂ ಸಂಜು ಎಂಬವರಿಗೂ ಕೈ ಹಾಗೂ ಕಾಲಿಗೆ ಚಾಕು ಇರಿತವಾಗಿದೆ.


































