ಬಂಡುಕೋರರಿಂದ ಗುಂಡಿನ ದಾಳಿ : ಬಿಎಸ್ಎಫ್ ಯೋಧ ಹುತಾತ್ಮ : ಇರ್ವರು ಯೋಧರಿಗೆ ಗಾಯ

ಇಂಫಾಲ್ : ಮಣಿಪುರದಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಓರ್ವ ಬಿಎಸ್‌ಎಫ್ ಯೋಧ ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡ ಘಟನೆ ನಡೆದಿದೆ. ಜೂ. 5-6ರ ಮಧ್ಯರಾತ್ರಿಯಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವಿನ ಗುಂಡಿನ ದಾಳಿಯಲ್ಲಿ ಮಣಿಪುರದ ಸೆರೌ ಪ್ರದೇಶದಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡು ಗಡಿ ಭದ್ರತಾ ಪಡೆಯ ಓರ್ವ ಯೋಧ ಸಾವನ್ನಪ್ಪಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದ ಸೆರೌ ಪ್ರದೇಶಗಳಲ್ಲಿ ಅಸ್ಸಾಂ ರೈಫಲ್ಸ್, ಬಿಎಸ್‌ಎಫ್ ಮತ್ತು ಪೊಲೀಸರಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಬಂಡುಕೋರರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಕೂಡ ಪ್ರತಿದಾಳಿ ನಡೆಸಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.































































error: Content is protected !!
Scroll to Top