ಕಾರ್ಕಳ : ಉದಯ್ ಶೆಟ್ಟಿ ಅಭಿಮಾನಿ ಬಳಗ ಮತ್ತು ಬ್ಲಾಕ್ ಕಾಂಗ್ರೆಸ್ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಜೂ. 8 ರಂದು ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಅವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ, ಅಭಿನಂದನಾ ಕಾರ್ಯಕ್ರಮ ಹಾಗೂ ಗೋಪೂಜೆ ನಡೆಯಲಿದೆ.
ಅಂದು ಪುಲ್ಕೇರಿ ಲಕ್ಷ್ಮೀ ದೇವಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2:30 ರವರೆಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಕಾರ್ಕಳ ತಾಲೂಕಿನ ಸರಕಾರಿ ಪ್ರೌಢಶಾಲಾ ವಿದ್ಯಾಭ್ಯಾಸದ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕ ಪಡೆದಿರುವ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾಭ್ಯಾಸದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 575 ಕ್ಕೂ ಅಧಿಕ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಲಿದೆ.
ಸಂಜೆ 3 ಗಂಟೆಗೆ ಬಂಡೀಮಠ ಅನಂತಕೃಷ್ಣ ಗೋಶಾಲೆಯಲ್ಲಿ ಗೋಪೂಜೆ ನೆರವೇರಲಿದೆ.































