ಗೃಹಲಕ್ಷ್ಮಿ ಯೋಜನೆಗೂ ಇದೆ ಹಲವು ಷರತ್ತು

ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೂ ಇದೆ ಹಲವು ಷರತ್ತು. ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಸರಕಾರ ಮಂಗಳವಾರ ಅಧಿಕೃತ ಸೂಚನೆ ಹೊರಡಿಸಿದೆ. ಈ ಯೋಜನೆಯಲ್ಲಿ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.

  1. ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ.
  2. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸುತ್ತದೆ.
  3. ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಜುಲೈ 15ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
  4. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು.
  5. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿ ಸ್ವಯಂಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದರೆ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
  6. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಜೋಡಣೆ ಮಾಡಬೇಕು.
  7. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಯೋಜನೆಗೆ ಅರ್ಹರಾಗಿರುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.




























































































































error: Content is protected !!
Scroll to Top