ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ : ಪರಮೇಶ್ವರ

ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್‌ಮುಕ್ತ ಮಾಡಲು ಆದೇಶ

ಮಂಗಳೂರು: ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಪರಮೇಶ್ವರ್ ಪೊಲೀಸ್ ಅಧಿಕಾರಿಗ ಜತೆ ಸಭೆ ನಡೆಸಿ ಬಳಿಕ, ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದರು.
ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.





























































































































error: Content is protected !!
Scroll to Top