ಗ್ಯಾರಂಟಿಗಳೆಲ್ಲ ಚುನಾವಣಾ ಗಿಮಿಕ್‌ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ ವೈರಲ್‌

ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡ್ತೀವಿ ಎಂದ ಸಚಿವ

ಬೆಂಗಳೂರು : ಕಾಂಗ್ರೆಸ್‌ನ ಗ್ಯಾರಂಟಿಗಳೆಲ್ಲ ಚುನಾವಣಾ ಗಿಮಿಕ್‌, ಗೆಲ್ಲಲು ಇಂಥ ಗಿಮಿಕ್‌ ಮಾಡಲೇಬೇಕಿತ್ತು. ಹೀಗೆಂದು ಹೇಳಿರುವುದು ಬಿಜೆಪಿಯವರಲ್ಲ. ಕಾಂಗ್ರೆಸ್‌ನವರೇ. ಕೃಷಿ ಸಚಿವ ಚೆಲುವರಾಯಸ್ವಾಮಿ ಉಚಿತ ಭಾಗ್ಯಗಳ ಕುರಿತಾಗಿ ಮಾತನಾಡಿರುವ ವೀಡಿಯೊ ತುಣುಕೊಂದು ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ಇದರಲ್ಲಿ ಅವರು ಉಚಿತ ಭಾಗ್ಯಗಳೆಲ್ಲ ಚುನಾವಣಾ ಗಿಮಿಕ್‌ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗ್ಯಾರಂಟಿಗಳ ವಿಚಾರದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸುತ್ತಿರವು ಬಿಜೆಪಿಗೆ ಈ ವೀಡಿಯೊ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ.
ಯೋಜನೆಗಳು ಅನುಷ್ಠಾನ ಹಂತದಲ್ಲಿರುವಾಗಲೇ ಕೃಷಿ ಸಚಿವ ಚೆಲುವರಾಯಸ್ವಾಮಿ ಸ್ಫೋಟಕ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್​ಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲ ಚರ್ಚೆಯಾಯಿತು. ನಾವು ಕೂಡ ಚರ್ಚೆ ಮಾಡಿದೆವು. ಇದು ಒಳ್ಳೆಯದಲ್ಲ ಎಂಬುದಾಗಿ. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟಬಹುದು ಅಂತ. ಈಗ ನಾವುಗಳೂ ಅದೇ ಲೈನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್, ಸರ್ಕಾರ ಬಂದ್ರೆ ತಾನೇ ನಾವೇನಾದ್ರೂ ಮಾಡಲು ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ನಾವು ಕೆಲಸ ಮಾಡಲು ಸಾಧ್ಯವಾಗುವುದು ಅನ್ನುವ ದೃಷ್ಟಿ ಬಂದಾಗ ಆವತ್ತಿಗೆ ರಿಸಲ್ಟ್ ಅನಿವಾರ್ಯ ಆಗುತ್ತದೆ. ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ, ಇಲ್ಲದ್ದು ಬಲ್ಲದ್ದು ಎಲ್ಲ ಮಾಡ್ತೀವಿ. ಬಟ್ ನಮ್ಮ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ, ಸಿದ್ದರಾಮಯ್ಯನವರ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ಆ್ಯಕ್ಸೆಪ್ಟ್ ಮಾಡಬೇಕಾಗುತ್ತದೆ ಎಂದು ಚೆಲುವರಾಯಸ್ವಾಮಿ ಹೇಳಿರುವುದು ವಿಡಿಯೋದಲ್ಲಿದೆ.
ಸುರೇಂದ್ರ ತಾಪುರ ಎಂಬವರು ಸಚಿವರ ಹೇಳಿಕೆ ಇರುವ ವಿಡಿಯೋ ತುಣುಕನ್ನು ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಕೃಷಿ ಸಚಿವ, ಕಾಂಗ್ರೆಸ್‌ನ ಚೆಲುವರಾಯಸ್ವಾಮಿ ಅವರು ಉಚಿತ ಭರವಸೆಯನ್ನು ಚುನಾವಣಾ ಗಿಮಿಕ್ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾರೆ. ಬಿಟ್ಟಿಗಳಿಗಾಗಿ ಕಾಂಗ್ರೆಸಿಗೆ ಮತ ಹಾಕಿದ ಕರ್ನಾಟಕದ ಹಿಂದೂಗಳಿಗೆ ಈಗ ಖುಷಿಯಾಗುತ್ತಿರಬಹುದು. ಮತ್ತೊಂದೆಡೆ, ಕಾಂಗ್ರೆಸ್‌ಗೆ ಮತ ಹಾಕಿದ ರಾಜಸ್ಥಾನದ ರೈತರು ಸಂಭ್ರಮಿಸುತ್ತಾರೆ. ಯಾಕೆಂದರೆ, 19 ಸಾವಿರ ರೈತರ ಭೂಮಿಯನ್ನು ಸಾಲ ಪಾವತಿಸದ ಕಾರಣಕ್ಕಾಗಿ ಬ್ಯಾಂಕ್‌ಗಳು ವಶಪಡಿಸಿಕೊಳ್ಳುತ್ತಿವೆ. ಹಿಂದೂಗಳು, ಈ ಭೂಮಿಯ ಮೇಲಿನ ಮೂರ್ಖರ ದೊಡ್ಡ ಗುಂಪೇ, ಏಕೆಂದರೆ ಅವರು ಅದನ್ನು ಮೀರಿ ಯೋಚಿಸುವುದಿಲ್ಲ ಎಂದು ಸುರೇಂದ್ರ ತಾಪುರ ವಿಡಿಯೋ ಜತೆಗೆ ಟ್ವಿಟರ್​ನಲ್ಲಿ ಉಲ್ಲೇಖಿಸಿದ್ದಾರೆ.





























































































































error: Content is protected !!
Scroll to Top