ಮಹಾರಾಷ್ಟ್ರ : ಟಿಪ್ಪು ಸುಲ್ತಾನ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ಆಕ್ಷೇಪಾರ್ಹ ಆಡಿಯೋ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಈ ಬಗ್ಗೆ ಕೆಲವು ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಶಿವಾಜಿ ಚೌಕ್‌ನಲ್ಲಿ ಜಮಾಯಿಸಿದ್ದರು. ಪ್ರತಿಭಟನೆ ಮುಗಿದ ನಂತರ ಗುಂಪು ಚದುರಿತು. ಆದರೆ ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕೊಲ್ಲಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಸುಲ್ತಾನ್ ಚಿತ್ರವನ್ನು ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಉಸ್ತುವಾರಿ ಸಚಿವ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ. ಹೆಚ್ಚುವರಿ ಪಡೆ ನಿಯೋಜನೆ ಮಾಡಲಾಗಿದೆ. ಈವರೆಗೆ 21 ಮಂದಿಯನ್ನು ಬಂಧಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಂಡಿತ್ ತಿಳಿಸಿದ್ದಾರೆ.
ರಾಜ್ಯವನ್ನು ಆಳುವವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸುವ ಜವಾಬ್ದಾರರು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಹೇಳಿಕೆಗೆ, ಪ್ರತಿಕ್ರಿಯೆಯಾಗಿ ಫಡ್ನವೀಸ್ ಆಡಳಿತ ಪಕ್ಷಗಳು ಮತ್ತು ಅವರ ಜನರು ರಸ್ತೆಗೆ ಬಂದು ಎರಡು ಧರ್ಮಗಳ ನಡುವೆ ಬಿರುಕು ಮೂಡಿಸಿದರೆ ಅದು ಒಳ್ಳೆಯ ಲಕ್ಷಣವಲ್ಲ. ಎಲ್ಲಾ ನಾಯಕರು ಒಂದೇ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಜನರು ಅವರಿಗೆ ಸಹಾಯ ಮಾಡುತ್ತಿದ್ದಾರೆ ಮತ್ತು ಔರಂಗಜೇಬನನ್ನು ವೈಭವೀಕರಿಸುತ್ತಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ಜನರು ಔರಂಗಜೇಬನನ್ನು ವೈಭವೀಕರಿಸುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಗಲಭೆಯಂತಹ ಪರಿಸ್ಥಿತಿ ನಡೆಯುತ್ತಿದೆ ಎಂದು ಹೇಳಿದ್ದಾರೆ.