ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ

ಕಾಸರಗೋಡು : ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಕಾಸರಗೋಡಿನ ನೀರ್ಚಾಲಿನಲ್ಲಿರುವ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೊ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೂ. 5ರಂದು ರಾತ್ರಿ ಊಟವಾದ ಬಳಿಕ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿದ ಬಳಿಕ ಪಲ್ಲವಿ ರೂರಲ್‌ ಸರ್ವೀಸ್‌ನ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನೇಮಕಗೊಂಡಿದ್ದರು. ಬಳಿಕ ಎಂ.ಡಿ. ಕೋರ್ಸ್‌ನ ಪರೀಕ್ಷೆ ಬರೆಯಲು ಅಲ್ಲಿಂದ ರಜೆಯಲ್ಲಿ ತೆರಳಿದ್ದರು. ಪರೀಕ್ಷೆಯ ಬಳಿಕ ಮನೆಗೆ ಬಂದಿದ್ದರು. ಎಂಡಿ ಕೋರ್ಸ್‌ನಲ್ಲಿ ನಿರೀಕ್ಷಿಸಿದಷ್ಟು ಅಂಕ ಸಿಗದಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಬದಿಯಡ್ಕ ಪೊಲೀಸರು ಮೃತದೇಹದ ಮಹಜರು ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.





























































































































error: Content is protected !!
Scroll to Top