ಒಡಿಶಾದಲ್ಲಿ ಮತ್ತೊಂದು ರೈಲು ದುರಂತ

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು – ಆರು ಮಂದಿ ಸಾವು

ದೆಹಲಿ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ನಡೆದಿದೆ. ಗೂಡ್ಸ್ ರೈಲಿಗೆ ಸಿಲುಕಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.

ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ರೈಲಿನ ಬೋಗಿಗಳ ಕೆಳಗೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದರು.
ಹವಾಮಾನ ವೈಪರೀತ್ಯದಿಂದ ಜೋರಾಗಿ ಗಾಳಿ ಬೀಸಿದ್ದು, ರೈಲು ಚಲಿಸಿದ್ದರಿಂದ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಾಗೂ ಗಾಯಾಳುಗಳು ಗುತ್ತಿಗೆ ಆಧಾರದಲ್ಲಿ ಕೆಲಸ



































































































































































error: Content is protected !!
Scroll to Top