ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯಲ್ಲಿ ಪರಿಸರ ದಿನಾಚರಣೆ – ಬಹುಮಾನ ವಿತರಣೆ

ಕಾರ್ಕಳ : ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಿಕ್ಷಕಿ ಶೋಭಾ ಜೈನ್, ಪರಿಸರ ಸಂರಕ್ಷಣೆ ಮಾಡಿದ್ದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬಹುದು. ಈ ನಿಟ್ಟಿನಲ್ಲಿ ಪರಿಸರ ದಿನಾಚರಣೆಯ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಮತ್ತು ವಿದ್ಯಾರ್ಥಿ ಜೀವನದಲ್ಲೇ ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳುವಂತಾಗಬೇಕು ಎಂದರು.
ಸ್ವಯಂ ಸೇವಕಿ ಆರತಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯನ್ನು ಮೂಡಿಸುವಂತಹ ವಾತಾವರಣ ಕಲಿಕಾ ಕೇಂದ್ರಗಳಲ್ಲಿ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಗಿಡ ನೆಡಿಸಿ ಪೋಷಣೆ ಮಾಡುವ ಮತ್ತು ವರ್ಷದ ಕೊನೆಯಲ್ಲಿ ಉತ್ತಮವಾಗಿ ಬೆಳೆದ ಗಿಡಗಳಿಗೆ ಬಹುಮಾನಗಳನ್ನು ನೀಡುವ ಕಾರ್ಯಕ್ರಮ ಶಾಲೆಯಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು ಉಪಸ್ಥಿತರಿದ್ದರು.



































































































































































error: Content is protected !!
Scroll to Top