24 ಪುಟಗಳ ಡೆತ್‌ನೋಟ್ ಬರೆದಿಟ್ಟ ಯುವತಿ
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ದೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮ ಹತ್ಯೆಗೈದ ಯುವತಿ. ಜೂ. 7ರಂದು ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.
ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಮನೆಯೊಂದನ್ನು ಖರೀದಿಸಿ ಜೂ.3 ರಂದು ಗ್ರಹ ಪ್ರವೇಶ ಮಾಡಿ ತಾಯಿ ದೇವಕಿ ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.