ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಸಾಯಿಸಿದ್ದಾರೆ ಎಂಬ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿಸಿದ್ದಾರೆ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿರುವ ಬೆಳ್ತಂಗಯ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಕೇಸ್‌ಗೆ ಹೈಕೋರ್ಟ್ ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್ ಐಪಿಸಿ ಸೆಕ್ಷನ್‌ 153ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹರೀಸ್‌ ಪೂಂಜ ಹೇಳಿಕೆಯ ಬಳಿಕ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜ ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ ಎಂದು ಕಿಡಿ ಕಾರಿದ್ದರು.



































































































error: Content is protected !!
Scroll to Top