ಬೆಂಗಳೂರು : ವಿಧಾನಮಂಡಲದ ಅಧಿವೇಶನ ಜು. 3ರಂದು ಪ್ರಾರಂಭವಾಗಲಿದ್ದು, ಆ ದಿನ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜು. 4 ರಿಂದ ಉಭಯ ಸದನಗಳ ಅಧಿಕೃತ ಕಾರ್ಯಕಲಾಪಗಳು ಆರಂಭವಾಗಲಿದ್ದು, ಜು. 8 ಮತ್ತು 9ರಂದು ಸಾರ್ವತ್ರಿಕ ರಜಾ ದಿನಗಳು ಹೊರತುಪಡಿಸಿ ಜು.14ರವರೆಗೆ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆ ಹೊರಡಿಸಿದ್ದಾರೆ. ಜು. 7ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.
ಜು. 3 ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ : ಜು. 7 ರಂದು ಸಿದ್ಧರಾಮಯ್ಯ ಬಜೆಟ್ ಮಂಡನೆ


































