ಮೈಸೂರು: ನಾವು ಜನರಿಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಜು. 1ರಿಂದ ಎಲ್ಲರಿಗೂ 10 ಕೆ.ಜಿ. ಉಚಿತ ಅಕ್ಕಿ ನೀಡುತ್ತೇವೆ. ನಾಳೆಯಿಂದ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಂಜನಗೂಡಿನ ಬಿಳಿಗೆರೆಯಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ನುಡಿದಂತೆ ನಡೆಯುತ್ತಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದರು. ಬಿಜೆಪಿ ನಾಯಕರು ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಸೋಲಿನ ಭೀತಿ ಆರಂಭವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ನಾವು ಒಂದು ಸ್ಥಾನವನ್ನು ಗೆದ್ದಿಲ್ಲ. ಆದ್ರೆ ಬಿಜೆಪಿ 9 ಜಿಲ್ಲೆಗಳಲ್ಲಿ ಒಂದೇ ಒಂದು ಕ್ಷೇತ್ರ ಗೆದ್ದಿಲ್ಲ ಎಂದು ಟಾಂಗ್ ನೀಡಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ 20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.



































