ಚಕ್ರವರ್ತಿ ಸೂಲಿಬೆಲೆ ಪಠ್ಯಕ್ಕೆ ಕೊಕ್‌ : ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಭಾರಿ ವಿರೋಧ

ಪ್ರಿಯಾಂಕ್‌ ಖರ್ಗೆಯ ವಿದ್ಯಾರ್ಹತೆಯ ಬಗ್ಗೆ ಪ್ರಶ್ನೆ

ಬೆಂಗಳೂರು : ಚಕ್ರವರ್ತಿ ಸೂಲಿಬೆಲೆ ವಾಸ್ತವವನ್ನು ಹೇಳುವ ವ್ಯಕ್ತಿ ಅಲ್ಲ. ಅಂತಹ ಬಾಡಿಗೆ ಭಾಷಣಕಾರರು ಬರೆದಿದ್ದನ್ನೆಲ್ಲಾ ನಮ್ಮ ಮಕ್ಕಳು ಓದಿದರೆ ಅವರ ಭವಿಷ್ಯ ಏನಾಗಬೇಕು. ಹಾಗಾಗಿ ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸಿರುವ ಅವರು ಬರೆದಿರುವ ಪಠ್ಯವಿಷಯವನ್ನು ತೆಗೆದುಹಾಕುತ್ತೇವೆ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದು ಈಗ ವಿವಾದಕ್ಕೆಡೆ ಮಾಡಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಪೆಎಚ್‌ಡಿ ಮಾಡಿದವರು ಮಾತ್ರ ಸಾಹಿತಿಗಳಾ ಎಂದು ಕೆಲವರು ಪ್ರಿಯಾಂಕ ಖರ್ಗೆಯ ಕಾಲೆಳೆದಿದ್ದಾರೆ.
ಕೆಲವರು ಪ್ರಿಯಾಂಕ್‌ ಖರ್ಗೆಯ ವಿದ್ಯಾರ್ಹತೆಯನ್ನೇ ಪ್ರಶ್ನಿಸಿದ್ದು, ಪಿಯುಸಿ ಫೇಲ್‌ ಆದವರೆಲ್ಲ ಸಚಿವರಾದರೆ ಮಾತ್ರ ಇಂಥ ಚಿಂತನೆಗಳು ಬರಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆ ಯಾರು? ಯಾವ ಪಿಎಚ್‌ಡಿ ಮಾಡಿದ್ದಾರೆ? ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಬರೆದ ಪಾಠವನ್ನು ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಚಕ್ರವರ್ತಿ ಸೂಲಿಬೆಲೆ ಯಾವ ಪಿಎಚ್‌ಡಿ ಮಾಡಿದ್ದಾರೆ? ಬಾಡಿಗೆ ಭಾಷಣಕಾರರನ್ನೆಲ್ಲಾ ನೀವು ಲೇಖಕರು, ಸಾಹಿತಿಗಳು ಮಾಡಿದರೆ ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್‌ ಯುನಿವರ್ಸಿಟಿಯಲ್ಲಿ ಓದೋರು ಇವರು. ಅಲ್ಲಿಯ ಕುಲಪತಿಗಳು ನಮ್ಮ ಮಕ್ಕಳ ಪಠ್ಯಪುಸ್ತಕ ರಚನೆ ಮಾಡಲು ಪ್ರಾರಂಭ ಮಾಡಿದ್ದಾರೆ. ಅಂತಹ ಪಾಠವನ್ನು ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು? ಎಂದು ಕಿಡಿಕಾರಿದ್ದಾರೆ.
ಭಗತ್‌ ಸಿಂಗ್‌, ಸುಖದೇವ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಪಾಠ ಇದೆ ಎಂದು ಕೇಳಿದ ಪ್ರಶ್ನೆಗೆ, ಭಗತ್‌ ಸಿಂಗ್‌ ಬಗ್ಗೆ ಅಪಾರವಾದ ಗೌರವ ಇದೆ. ಅವರ ನಿಜವಾದ ಇತಿಹಾಸವನ್ನು ನಾವು ಹೇಳ್ತೀವಿ. ನಾನು ನಾಸ್ತಿಕ ಏಕೆ ಆಗಿದ್ದೇನೆ ಎಂಬ ಭಗತ್‌ ಸಿಂಗ್‌ ಅವರ ಪುಸ್ತಕ ಇದೆ. ಅದನ್ನು ಚಕ್ರವರ್ತಿ ಸೂಲಿಬೆಲೆ ಓದಿ ಬಿಡಲಿ ಸಾಕು. ಇತಿಹಾಸವನ್ನು ತಿರುಚದೆ ಪಾಠಗಳನ್ನು ನಾವು ಪಠ್ಯಪುಸ್ತಕದಲ್ಲಿ ಅಳವಡಿಸುತ್ತೇವೆ ಎಂದರು.

































































































































































error: Content is protected !!
Scroll to Top