ಸರ್ವಿಸ್ ರಸ್ತೆಯಲ್ಲಿ ಬೆಳಗ್ಗೆ ನಡೆದ ಅಪಘಾತ
ಉಡುಪಿ : ಕಟಪಾಡಿ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಬೈಕ್ಗೆ ಬಸ್ ಗುದ್ದಿ ಸ್ಥಳೀಯ ಹೂವಿನ ವ್ಯಾಪಾರಿ ಸಾವಿಗೀಡಾಗಿದ್ದಾರೆ.
ಮೃತರನ್ನು ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರ ಮಾಡುತ್ತಿದ್ದರು.
ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಇಕ್ಬಾಲ್ ಸ್ಥಳದಲ್ಲೇ ಮೃತಪಟ್ಟಿದ್ದರು. ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದೆ.





































