ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ : ವಿಪಕ್ಷಗಳಿಗೆ ಡಿಕೆಶಿ​​​ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯೋಜನೆ ಜಾರಿ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಕಿಡಿಕಾರಿದ್ದು, ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದ್ದಾರೆ.

ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ‘ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೇವು. ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್​​​ ಸ್ನೇಹಿತರು ಟೀಕೆಗಳ ಸುರಿಮಳೆ ಸುರಿಸ್ತಿದ್ದಾರೆ. ಮಂಗಳೂರಿನಲ್ಲಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದೆವು. ಬಹಳ ಚರ್ಚೆ ಮಾಡಿಯೇ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ನಮ್ಮ ರಾಜ್ಯ ದಿವಾಳಿ ಆಗುತ್ತೆ ಅಂತಾ ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ಆದಕ್ಕೆ ಆಸ್ಪದ ನೀಡುವುದಿಲ್ಲ. ಪ್ರತಿಯೊಂದಕ್ಕೂ ಲೆಕ್ಕ ಇಡುತ್ತೇವೆ. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ನಮ್ಮ ಹೆಮ್ಮೆಯ ಸಂಸ್ಥೆಗಳು. ಅವುಗಳಿಗೆ ನಷ್ಟವಾಗಲು ಬಿಡುವುದಿಲ್ಲ. ಪ್ರತಿಯೊಂದಕ್ಕೆ ಲೆಕ್ಕ ಇಟ್ಟು ಸರಕಾರದ ವತಿಯಿಂದ ಆ ಹಣವನ್ನು ನೀಡುತ್ತೇವೆ ಎಂದರು.











































































error: Content is protected !!
Scroll to Top