ಶುಕ್ರವಾರದಿಂದ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಕೆ

ಗಂಡ-ಹೆಂಡತಿಯ ಆಧಾರ್‌, ಮೊಬೈಲ್ ಸಂಖ್ಯೆ, ಅರ್ಜಿದಾರರ ಬ್ಯಾಂಕ್‌ ಖಾತೆ ಸಂಖ್ಯೆ ಅಗತ್ಯ

ಬೆಂಗಳೂರು: ಕಾಂಗ್ರೆಸ್‌ನ ಇನ್ನೊಂದು ಮಹತ್ವಾಕಾಂಕ್ಷೆಯ ಗ್ಯಾರಂಟಿಗಳಲ್ಲಿ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುಕ್ರವಾರದಿಂದ ಪ್ರಾರಂಭವಾಗಲಿದೆ. ಈ ಯೊಜನೆಯಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ಸಿಗಲಿದೆ.
ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್‌ನವರಿಗೆ ಮಾತ್ರ ಈ ಯೋಜನೆ ಲಾಭ ಸಿಗುತ್ತದೆ. ಶುಕ್ರವಾರದಿಂದ ಆಫ್‌ಲೈನ್ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ನಾಳೆ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಸೇವಾ ಸಿಂಧು ಪೋರ್ಟಲ್​ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್ ​ಪೋರ್ಟಲ್​ ಸಿಎಂರಿಂದ ಲಾಂಚ್ ಮಾಡಲಿದ್ದಾರೆ.
ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ನೇರವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಂದು ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಶುಲ್ಕ ವಿಧಿಸಲಾಗುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ, ಲೋಪದೋಷಗಳಿದ್ದಲ್ಲಿ ಸಹಾಯವಾಣಿ-1902 ಗೆ ಸಂಪರ್ಕಿಸಬಹುದು ಎಂದು ಸಚಿವೆ ಮಾಹಿತಿ ನೀಡಿದರು.
ಗೃಹಲಕ್ಷ್ಮಿಸ್ಕೀಂನಡಿ ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್‌ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ಬ್ಯಾಂಕ್‌ ಖಾತೆಗೆ ನೇರ ವರ್ಗಾವಣೆ ಮಾಡಲಾಗುವುದು.
ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಅರ್ಜಿದಾರರ ಪತಿ ತೆರಿಗೆದಾರರು ಆಗಿದ್ರೆ ಅರ್ಜಿ ಸ್ವೀಕಾರ ಆಗೋದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.

















































error: Content is protected !!
Scroll to Top