ಕಲ್ಯಾ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಕಾರ್ಕಳ : ಕಲ್ಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 145 ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳು ಕೊಡಮಾಡಿದ ಪುಸ್ತಕ, ಬ್ಯಾಗ್, ಕೊಡೆ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ಜೂ. 15ರಂದು ವಿತರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲ್ಯಾ ಗ್ರಾ. ಪಂ. ಸದಸ್ಯ ಜಗದೀಶ್ ಆಚಾರ್ಯ, ಹಳೆ ವಿದ್ಯಾರ್ಥಿ ಮಿಥುನ್ ಅತಿಕಾರಿ, ರವಿರಾಜ್ ಉಪಾಧ್ಯಾಯ, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಸಂತೋಷ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷ ಆಶಾ, ಆರೋಗ್ಯ ಕಾರ್ಯಕರ್ತೆ ಪೂರ್ಣಿಮಾ, ಶಿಕ್ಷಕ ವೃಂದ ಹಾಗೂ ಪೋಷಕರು ಈ ಸಂದರ್ಭ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕಸ್ತೂರಿ ಎಸ್. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾರದಾ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಅನಿತಾ ಮಥಾಯಸ್ ವಂದಿಸಿದರು.













































































error: Content is protected !!
Scroll to Top