ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಕಾಂಗ್ರೆಸ್‌ ನ ಹಿರಿಯ ಶಾಸಕರ ಒತ್ತಾಯ

ಗ್ಯಾರಂಟಿಗಳ ಜಾರಿಗೆ ಷರತ್ತು ಬೇಡವೆಂದ ಶಾಮನೂರು ಶಿವಶಂಕರಪ್ಪ

ದಾವಣಗೆರೆ : ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳು ಅಕ್ಷರಶಃ ಹೆಣಗಾಡುತ್ತಿವೆ. ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಕೆಇಆರ್‌ಸಿ ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು ಎಂಬ ವರದಿಗಳಿವೆ. ರಾಜ್ಯ ಸರಕಾರ ಇದಕ್ಕೆ ಸಹಿ ಹಾಕಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಬಾರದು ಮತ್ತು ಅದು ಹಳೆಯ ವಿದ್ಯುತ್ ದರವನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳ ಜಾರಿಗೆ ಷರತ್ತುಗಳನ್ನು ವಿಧಿಸಬಾರದು. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳಬಾರದು. ಕೊಟ್ಟ ಮಾತಿನಂತೆಯೇ ಸರಕಾರ ನಡೆದುಕೊಳ್ಳಬೇಕು. ಮುಂದೆ ವಿದ್ಯುತ್ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದವರು ಸಲಹೆ ನೀಡಿದರು.







































































error: Content is protected !!
Scroll to Top