ಲೋಕಸಭೆಯಿಂದ ಅನರ್ಹಗೊಂಡ ವಿಫಲ ನಾಯಕನ ಪಠ್ಯ ಮಾಡುತ್ತೀರೇ ?

ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ ? ಸರಕಾರಕ್ಕೆ ಸುನಿಲ್‌ ಪ್ರಶ್ನೆಗಳ ಸುರಿಮಳೆ

ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್‌ ಮತ್ತು ಹೆಗ್ಡೇವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ‌ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ ? ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರಕಾರವನ್ನು ಪ್ರಶ್ನಿಸಿದ್ದಾರೆ.
ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ ಕಿಡಿಕಾರಿರುವ ಅವರು, ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ? ಎಂದು ಪ್ರಶ್ನಿಸಿದ್ದಾರೆ.

ಕುಕ್ಕರ್‌ ಸ್ಫೋಟದ ಆರೋಪಿಗೂ ದೇಶಭಕ್ತರ ಸಾಲಿನಲ್ಲಿ ಅವಕಾಶ ದೊರೆಯಬಹುದು
ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ “ಲೂಲು ಮಾಲ್” ಕಟ್ಟಿದವರ ಇತಿಹಾಸವನ್ನೂ‌ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸಿಗರು ಹೇಳಿಕೊಡಬಹುದು. ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರಕಾರದ ಈ‌ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇಡೀ ರಾಜ್ಯಕ್ಕೆ ಹಿಜಾಬ್‌ ತೊಡಿಸುವ ಹುನ್ನಾರ ನಡೆಸಿದೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯಿದೆ ವಾಪಾಸ್ ತೆಗೆದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ‌ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡೀ ರಾಜ್ಯಕ್ಕೆ ಹಿಜಾಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.











































































error: Content is protected !!
Scroll to Top