ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 16 ರಂದು ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಸಂಭವಿಸಿದೆ. ಅಶೋಕ್‌ ಶೆಟ್ಟಿಯವರ ಮಗ ಅಮೃತ್‌ ಶೆಟ್ಟಿ (21) ನೇಣಿಗೆ ಶರಣಾದ ವಿದ್ಯಾರ್ಥಿ. ಈತ ನಿಟ್ಟೆ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವಿದ್ಯಾಭ್ಯಾಸ ಮಾಡುತ್ತಿದ್ದರು. ಮನನೊಂದು ಜೋಡುರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‌ ಮೃತ ವಿದ್ಯಾರ್ಥಿ ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

















































error: Content is protected !!
Scroll to Top