ಸರಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಫೋಟೊ
ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ಇನ್ನು ಸಂವಿಧಾನದ ಓದು ಕಡ್ಡಾಯವಾಗಲಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಕಡ್ಡಾಯವಾಗಿ ಓದುವುದನ್ನು ಕಡ್ಡಾಯಗೊಳಿಸಲು ಮತ್ತು ಎಲ್ಲ ಸರ್ಕಾರಿ ಕಚೇರಿ, ಇಲಾಖೆಗಳಲ್ಲೂ ಸಂವಿಧಾನದ ಪೀಠಿಕೆಯ ಫೋಟೊ ಹಾಕಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಭಾವಚಿತ್ರವನ್ನು ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.
ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಯುವಕರು ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ಸಚಿವ ಸಂಪುಟ ಸಭೆ ಬಳಿಕ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
























