ಮುಲ್ಲೈ ಮುಹಿಲನ್ ನೂತನ ಜಿಲ್ಲಾಧಿಕಾರಿ
ಮಂಗಳೂರು : ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲ್ಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ್ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ತಮಿಳುನಾಡು ಮೂಲದ ಮುಲ್ಲೈ ಮುಹಿಲನ್ 2013 ರ ಬ್ಯಾಚ್ ಐಎಎಸ್ ಅಧಿಕಾರಿ. ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.


























