ಫೇಸ್‌ಬುಕ್‌ನಲ್ಲಿ ಗ್ಯಾರಂಟಿ ಲೇವಡಿ ಮಾಡಿದ ವ್ಯಕ್ತಿಯ ವಿರುದ್ಧ ಕೇಸ್‌

ಸರಕಾರದ ಯೋಜನೆಗಳನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌ ದಾಖಲು

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ ಗದಗ ಜಿಲ್ಲೆಯ ಪಾನ್‌ಶಾಪ್ ವ್ಯಾಪಾರಿ ವಿರುದ್ಧ ಕೇಸು ದಾಖಲಿಸಲಾಗಿದೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನಿವಾಸಿ ಮುತ್ತಣ್ಣ ಯಮನಪ್ಪ ಮ್ಯಾಗೇರಿ ಮೇಲೆ ಕೇಸ್ ದಾಖಲಾಗಿದೆ. ಜೂನ್‌ 11ರಂದು ಮುತ್ತು ಮ್ಯಾಗೇರಿ ಎನ್ನುವ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಒಂದು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಮೂಲಕ ದ್ವೇಷ ಭಾವನೆ ಮೂಡಿಸುವ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಷರತ್ತಿನ ಮೇಲೆ ಷರತ್ತು ಹಾಕಿ ಕೊನೆಗೆ ಅವರ ಬಾಂಧವರಿಗಷ್ಟೇ ಯೋಜನೆ ತಲುಪಿಸುವುದು ಗ್ಯಾರಂಟಿಯ ಉದ್ದೇಶ ಎಂದು ಮುತ್ತಣ್ಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಇಷ್ಟೇ ಅಲ್ಲದೆ ಇಂದಿನಿಂದ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತ ವ್ಯಾನಿಟಿ ಬ್ಯಾಗಿಗೆ ಖಚಿತ ಇದು ಮುಲ್ಲಾ ಖಾನ್‌ ಆದೇಶ ಎಂದು ಬರೆದುಕೊಂಡಿದ್ದಾರೆ.
ಅರ್ಜುನ್‌ ಹನುಮಂತಪ್ಪ ರಾಥೋಡ್‌ ಎಂಬುವರು ದೂರು ನೀಡಿದ್ದರು. ದೂರನ್ನು ಸ್ವೀಕರಿಸಿರುವ ಗಜೇಂದ್ರಗಡ ಪೊಲೀಸರು ಅಪರಾಧ 0087/2023, ಐಪಿಸಿ ಸೆಕ್ಷನ್ 1860ರ ಕಲಂ 295A, 505(1)(B) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

















































error: Content is protected !!
Scroll to Top