ಕಾಶ್ಮೀರದಲ್ಲಿ ಐವರು ಉಗ್ರರ ಹತ್ಯೆ

ನಸುಕಿನ ಹೊತ್ತು ನಡೆದ ಭೀಕರ ಗುಂಡಿನ ಕಾಳಗ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗೆ ಐವರು ಉಗ್ರರು ಬಲಿಯಾಗಿದ್ದಾರೆ. ಶುಕ್ರವಾರ ನಸುಕಿನಿಂದ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ. ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಪೊಲೀಸರು ಹಾಗೂ ಸೈನಿಕರು ಉಗ್ರರ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ ಗುಂಡಿನ ಸುರಿಮಳೆ ಗೈದಿದ್ದಾರೆ. ಸತ್ತವರೆಲ್ಲ ಪಾಕಿಸ್ಥಾನದ ಭಯೋತ್ಪಾದಕರು ಎನ್ನಲಾಗಿದೆ. ಜೂ. 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

















































error: Content is protected !!
Scroll to Top