6 ಜನರಿಗೆ ಗಂಭೀರ ಗಾಯ, 2 ವರ್ಷದ ಮಗು ಪಾರು
ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 6 ಜನ ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಾಯವಾಗಿಲ್ಲ. ಸದ್ಯ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿನ ಆರ್.ಟಿ. ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾಗ ಅವಘಡ ಸಂಭವಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.







































