ಕಾರ್ಕಳ : ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ದುರ್ಗಾದೇವಿ ಅನುದಾನಿತ ಶಾಲೆಯಲ್ಲಿ ಜೂ. 17 ರಂದು ಡೆಂಗ್ಯೂ ಮತ್ತು ಮಲೇರಿಯಾ ಮಾಸಾಚರಣೆಯ ಮಾಹಿತಿ ಕಾರ್ಯಕ್ರಮ ಜರುಗಿತು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅನಿತ ಮಾತನಾಡಿ, ತಾಲೂಕಿನಲ್ಲಿ ಈಗಾಗಲೇ ಎರಡು ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಮನೆ ಹಾಗೂ ಶಾಲೆಯ ಸುತ್ತಮುತ್ತ ನೀರು ನಿಲ್ಲದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಜ್ವರದ ಲಕ್ಷಣ ಕಂಡು ಬಂದಲ್ಲಿ ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ಬಂದು ತಪಾಸಣೆ ನಡೆಸಿ ಸೂಕ್ತವಾದ ಆರೋಗ್ಯ ಕ್ರಮವನ್ನು ಪಾಲಿನೆ ಮಾಡಿ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸ್ವಾತಿ, ಆಶಾ ಕಾರ್ಯಕರ್ತೆ ಗಾಯತ್ರಿ ಮತ್ತು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಕ್ಕುಂದೂರು ಶಾಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಮಾಸಾಚರಣೆ































