ಕಾರ್ಕಳ : ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯು ಜೂ.17 ರಂದು ಇವಿಎಂ ಆ್ಯಪ್ ಮೂಲಕ ಮತಯಂತ್ರವನ್ನು ಬಳಸಿ ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆಯಿತು.
ಚುನಾವಣಾಧಿಕಾರಿಯಾಗಿ ರಾಜ್ಯಶಾಸ್ತ್ರ ಉಪನ್ಯಾಸಕ ನೇಮಿರಾಜ್ ಶೆಟ್ಟಿ ಕರ್ತವ್ಯ ಸಲ್ಲಿಸಿದರು. ಉಪನ್ಯಾಸಕ ವೃಂದ ಹಾಗೂ ಕಾಲೇಜು ಸಿಬ್ಬಂದಿ ಚುನಾವಣೆಯ ಪ್ರಕ್ರಿಯೆಯಲ್ಲಿ ಸಹಕರಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುವೀಕ್ಷಾ, ಉಪಾಧ್ಯಕ್ಷರಾಗಿ ಹತ್ತನೇ ತರಗತಿಯ ವಿದ್ಯಾರ್ಥಿ ನಿಖಿತ್ ಕೆ. ಎಸ್. ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮನೀಕ್ಷಾ ಆಯ್ಕೆಯಾದರು. ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳನ್ನು ಕಾಲೇಜು ಪ್ರಾಂಶುಪಾಲ ರಾಮದಾಸ್ ಪ್ರಭು, ಹಿರಿಯ ಸಹ ಶಿಕ್ಷಕ ಯೋಗೇಂದ್ರ ನಾಯಕ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.
ಎಸ್.ವಿ.ಟಿ : ವಿದ್ಯಾರ್ಥಿ ಸಂಘ ರಚನೆ































