ವಿದ್ಯುತ್‌ ದರ ಏರಿಕೆ ಖಂಡನೀಯ

ಸರಕಾರದ ವಿರುದ್ಧ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹ

ಉಡುಪಿ : ವಿದ್ಯುತ್ ದರ ಹೆಚ್ಚಳದ ವಿರುದ್ಧ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆ ಅಧ್ಯಕ್ಷ ಪ್ರಶಾಂತ್ ಬಾಳಿಗ, ಪವರ್ ಅಧ್ಯಕ್ಷ ಸುವರ್ಣ್ ಮಿಂಜ್, ಗೇರುಬೀಜ ಉದ್ಯಮಿ ಹೆಬ್ರಿ ಸತೀಶ್ ಪೈ ಹಾಗೂ ಹೊಟೇಲ್ ಹಾಗೂ ಇತರೆ ಸಂಘ ಸಂಸ್ಥೆಗಳ ಮಾಲೀಕರು ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 13,000 ಸಣ್ಣ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, 1,65,000 ಉದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಜೊತೆಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. ಜಿಲ್ಲೆಯ ಅಭಿವೃದ್ಧಿ ಮತ್ತು ಎಲ್ಲಾ ಸಣ್ಣ-ಪ್ರಮಾಣದ ಕೈಗಾರಿಕೆಗಳನ್ನು ರಕ್ಷಿಸಲು, ಸಂಘವು ಈ ಮೂಲಕ ವಿದ್ಯುತ್ ದರವನ್ನು ಕಡಿಮೆ ಮಾಡಲು ಆಗ್ರಹಿಸಿದೆ ಎಂದು ಅವರು ಹೇಳಿದರು.
ವಿದ್ಯುತ್‌ ದರ ಇಳಿಸಲು ಸರಕಾರ ವಿಫಲವಾದರೆ, ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ ಸಂಘವು ವಿದ್ಯುತ್ ತೆರಿಗೆಯನ್ನು 9% ರಿಂದ 5% ಕ್ಕೆ ಇಳಿಸುವಂತೆ ಒತ್ತಾಯಿಸಿತು.











































































error: Content is protected !!
Scroll to Top