ಕಾರ್ಕಳ : ಬದುಕನ್ನು ನಾವು ಅರ್ಥ ಮಾಡಿಕೊಳ್ಳುವುದು ಅವಶ್ಯ. ನಾವು ನಮ್ಮ ಶಕ್ತಿ ಮತ್ತು ಸ್ವಂತಿಕೆ ಬಗ್ಗೆ ಅರಿವು ಹೊಂದಿರಬೇಕೆಂದು ಮಣಿಪಾಲ ವಿಶ್ವವಿದ್ಯಾಲಯದ ಸಹ ಕುಲಪತಿ ಹಾಗೂ ಶ್ರೀ ಭುವನೇಂದ್ರ ಕಾಲೇಜಿನ ಪೂರ್ವ ವಿದ್ಯಾರ್ಥಿ ಡಾ. ಶರತ್ ಕುಮಾರ್ ರಾವ್ ಹೇಳಿದರು.
ಅವರು ಶ್ರೀ ಭುವನೇಂದ್ರ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ ಮಾತನಾಡಿ, ಹಳೆವಿದ್ಯಾರ್ಥಿಗಳು ಎಂದೆಂದಿಗೂ ತಾವು ಕಲಿತ ಸಂಸ್ಥೆಯ ಕುರಿತು ಅಭಿಮಾನ ಹೊಂದಿರಬೇಕು. ತಮ್ಮಿಂದ ಆಗುವ ಸಹಾಯ ಮಾಡಬೇಕೆಂದು ತಿಳಿಸಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ್ ಎ. ಕೋಟ್ಯಾನ್ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಮೇಶ್ ಎಸ್.ಸಿ. ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಟಿ.ಎ. ಜಗದೀಶ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿನಿ ಹಾಗೂ ಪ್ರಾಣಿಶಾಸ್ತ್ರ ವಿಭಾಗದ ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು. ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶಂಕರ್ ಕುಡ್ವ ಕಾರ್ಯಕ್ರಮ ನಿರೂಪಿಸಿದರು.
ಬದುಕನ್ನು ಅರ್ಥ ಮಾಡಿಕೊಳ್ಳುವುದು ಅವಶ್ಯ – ಡಾ. ಶರತ್ ಕುಮಾರ್ ರಾವ್


































