ತೀರ್ಥಹಳ್ಳಿಯಲ್ಲಿ ಸಂಭವಿಸಿದ ದಾರುಣ ಘಟನೆ
ಕಾರ್ಕಳ : ಪ್ರವಾಸಕ್ಕೆಂದು ತೆರಳಿದ್ದ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ದುರ್ಘಟನೆ ತೀರ್ಥಹಳ್ಳಿಯ ತೀರ್ಥಮತ್ತೂರು ಎಂಬಲ್ಲಿ ಜೂ. 18ರಂದು ಸಂಭವಿಸಿದೆ. ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದು, ಓರ್ವನ ಮೃತದೇಹ ಪತ್ತೆಯಾಗಿದೆ. ಕಾರ್ಕಳದ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂ.ಸಿ.ಎ. ವಿಭಾಗದ ಉಪನ್ಯಾಸಕರಾದ ಪುನೀತ್ (38) ಮತ್ತು ಐ.ಎಸ್. ವಿಭಾಗದ ಉಪನ್ಯಾಸಕ ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಉಪನ್ಯಾಸಕರು ಶನಿವಾರ ತಮ್ಮ ಸ್ನೇಹಿತರೊಂದಿಗೆ ತೀರ್ಥಹಳ್ಳಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರವಾಸಕ್ಕೆಂದು ಹೋಗಿದ್ದ ಉಪನ್ಯಾಸಕರು ಈಜಲು ಇಳಿದಾಗ ಈ ದುರಂತ ಸಂಭವಿಸಿದೆ. ಓರ್ವನ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವರಿಗಾಗಿ ಹುಡುಕಾಟ ಮುಂದುವರಿದಿದೆ. ಹಿರಿಯೂರಿನ ಬಾಲಾಜಿ ಎಂಬವರ ಮೃತದೇಹ ಪತ್ತೆಯಾಗಿದೆ.































































