ವೀಡಿಯೊ ಶೇರ್ ಮಾಡದಂತೆ ಪೊಲೀಸರಿಂದ ಎಚ್ಚರಿಕೆ
ಶಿವಮೊಗ್ಗ: ತೀರ್ಥಹಳ್ಳಿಯ ಯುವಕನೊಬ್ಬ ಹಲವು ಯುವತಿಯರ ಜತೆ ಅಶ್ಲೀಲ ಭಂಗಿಯಲ್ಲಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಈ ಯುವಕನನ್ನು ವಶಕ್ಕೆ ಪಡೆದು ಎಫ್ಐಆರ್ ದಾಖಲಿಸಿದ್ದಾರೆ.
ಯುವಕ ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಎಂದು ಹೇಳಲಾಗಿದೆ. ಕೆಲವು ಯುವತಿಯರ ಜತೆಗೆ ಅಶ್ಲೀಲ ಭಂಗಿಯಲ್ಲಿರುವ ವಿಡಿಯೊ ತುಣುಕುಗಳು ಕೆಲದಿನಗಳಿಂದ ವೈರಲ್ ಆಗಿದೆ. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವಕನೊಬ್ಬ ಕೆಲವು ಯುವತಿಯರ ಜತೆಗೆ ಇರುವ ವಿಡಿಯೋ ತೀರ್ಥಹಳ್ಳಿಯಲ್ಲಿ ವೈರಲ್ ಆಗಿದೆ. ಯುವಕನನ್ನು ವಶಕ್ಕೆ ಪಡೆದಿದ್ದೇವೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದ್ದಾರೆ.
ಈ ವಿಡಿಯೋಗಳನ್ನು ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಾಡುವುದು ಮತ್ತು ಸ್ಟೋರ್ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ 67 (E) ಅಡಿ ಶಿಕ್ಷಾರ್ಹ ಅಪರಾಧ. ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ. ಈ ಕುರಿತು ಗ್ರೂಪ್ ಅಡ್ಮಿನ್ಗಳು ಕೂಡ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.
ಎಬಿವಿಪಿ ನಾಯಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕು ಎಂದು ಎನ್ಎಸ್ಯುಐ ಸಂಘಟನೆ ಕಾರ್ಯಕರ್ತರು ತೀರ್ಥಹಳ್ಳಿ ಡಿವೈಎಸ್ಪಿಗೆ ದೂರು ನೀಡಿದ್ದಾರೆ.






























































