ಬೆಂಗಳೂರು : ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ಜೂ.30ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೂ.18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ತ್ಯಜಿಸಿ ಕಾಂಗ್ರೆಸ್ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್ಗೆ ಟಿಕೆಟ್ ನೀಡಲಾಗಿದೆ. ನಿರೀಕ್ಷೆಯಂತೆಯೇ ಎನ್.ಎಸ್.ಬೋಸರಾಜು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗ ತಿಪ್ಪಣ್ಣ ಕಮಕನೂರ್ ಅವರಿಗೂ ಟಿಕೆಟ್ ಘೋಷಣೆ ಮಾಡಲಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜೂ.20 ಕೊನೆಯ ದಿನವಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜೂ. 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂ.23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ. 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಆ ನಂತರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.
ವಿಧಾನಪರಿಷತ್ ಉಪ ಚುನಾವಣೆ : ಕಾಂಗ್ರೆಸ್ನಿಂದ ಜಗದೀಶ್ ಶೆಟ್ಟರ್, ಬೋಸರಾಜು, ತಿಪ್ಪಣ್ಣಗೆ ಟಿಕೆಟ್





































